Breaking News

ಪಾರ್ಲಿಮೆಂಟ್ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆ : ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ

Spread the love

ಪಾರ್ಲಿಮೆಂಟ್ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆ : ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ

ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಪತನದ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಹಿಂದೆ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ತಿರುಗೇಟು ನೀಡಿದ್ದು ಪಾರ್ಲಿಮೆಂಟ್ ಚುನಾವಣೆಯ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆಯಾಗುತ್ತದೆ ಎಂದು ಭವಿಷ್ಯ ನುಡಿದರು.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಏಕನಾಥ್ ಶಿಂದೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಶಿಂಧೆ ಇಲ್ಲ. ನಮಗೆ ಯಾವ ಭಯ ಇಲ್ಲ. ಮಹಾರಾಷ್ಟ್ರದಲ್ಲಿ ಪಾರ್ಲಿಮೆಂಟ್ ಚುನಾವಣೆ ಬಳಿಕ ನಮ್ಮ ಸರ್ಕಾರ ಬರುತ್ತದೆ.ಅವರ ಸರ್ಕಾರದ ಬಗ್ಗೆ ಅವರಿಗೆ ಅನಮಾನವಿದೆ. ಎಲೆಕ್ಷನ್ ಆದ ಬಳಿಕ ರಾಜ್ಯದಲ್ಲಿ ಯಾವುದೇ ಭಯವಿಲ್ಲ. ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂನ ಅನುಮಾನವಿದೆ ಎಂದರು.

ಮುಂದುವರೆದು ಅಲ್ಲಿ ಶಾಸಕರು ಯೂಟರ್ನ್ ಹೊಡೆಯುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಅಲ್ಲಿ ನಮ್ಮ ಪಕ್ಷದ ಸರ್ಕಾರ ಬರಲಿದೆ. ಅಲ್ಲಿ ಮೈತ್ರಿ ಸರ್ಕಾರ ಬರಲಿದೆ. ಎನ್‌ಸಿಪಿ, ಶಿವಸೇನೆಯ ಶಾಸಕರು ವಾಪಸ್ ಆಗುತ್ತಿದ್ದಾರೆ. ಅದಕ್ಕೆ ಅಲ್ಲಿ ಸರ್ಕಾರ ಬದಲಾವಣೆ ಆಗಲಿದೆ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ