Breaking News

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

Spread the love

ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಸಾರ್ವಜನಿಕರು ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುವುದಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ.

ಪ್ರತಿಕೂಲ ಹವಾಮಾನದ ಸಮಯದಲ್ಲಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗಬಾರದು.

ಗುಡುಗು- ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಚೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯಬೇಕು ಎಂದು ತಿಳಿಸಲಾಗಿದೆ.

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಕೆರೆ ಮತ್ತು ನದಿಗಳು ಹಾಗೂ ಇನ್ನಿತರ ನೀರಿನ ಮೂಲಗಳಿಂದ ತತ್‌ಕ್ಷಣವೇ ದೂರವಿರಬೇಕು. ವಿದ್ಯುತ್‌ ಉಪಕರಣ ಹಾಗೂ ವಿದ್ಯುತ್‌ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್‌ ಟವರ್‌, ಪವನ ವಿದ್ಯುತ್‌, ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು ಹಾಗೂ ಮನೆಗಳಲ್ಲೆ ಇರುವುದು ವಾಹನ ಚಾಲನೆಯಲ್ಲಿದ್ದರ ತತ್‌ಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು ಹಾಗೂ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು ಹಾಗೂ ಮರಗಳು ಮತ್ತು ವಿದ್ಯುತ್‌ ಲೈನ್‌ಗಳಿಂದ ದೂರ ವಾಹನ ನಿಲುಗಡೆ ಮಾಡಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು ಎನ್ನಲಾಗಿದೆ


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ