Breaking News

ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

Spread the love

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿ ಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ ಬಂಧನಕ್ಕೆ ಎಸ್‌ಐಟಿ ಮತ್ತೂಂದು ಅಸ್ತ್ರ ಸಿದ್ಧಪಡಿಸಲು ಮುಂದಾಗಿದ್ದು, ಕೋರ್ಟ್‌ ಮೂಲಕ ಆರೋಪಿಯ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಲು ಚಿಂತನೆ ನಡೆಸಿದೆ.

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

ಕೇಂದ್ರ ಸರಕಾರ ನೀಡಿರುವ ರಾಜತಾಂತ್ರಿಕ ಪಾಸ್‌ ಪೋರ್ಟನ್ನು ರದ್ದುಗೊಳಿಸಿ ಆರೋಪಿ ದೇಶಕ್ಕೆ ಮರಳಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಬರೆದ ಪತ್ರಕ್ಕೆ ಕೇಂದ್ರ ಯಾವುದೇ ಉತ್ತರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಕೋರ್ಟ್‌ ಮೂಲಕ ಆರೋಪಿಗೆ ನೀಡಿರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮತ್ತು ಸಾಮಾನ್ಯ ಪಾಸ್‌ಪೋರ್ಟ್‌ ರದ್ದುಗೊಳಿಸಲು ಮುಂದಾಗಿದೆ. ಈಗಾಗಲೇ ಲುಕ್‌ಔಟ್‌ ನೋಟಿಸ್‌, ಬ್ಲೂಕಾರ್ನರ್‌ ನೋಟಿಸ್‌ ಹೊರಡಿಸಲಾಗಿದೆ. ಈ ಮಧ್ಯೆ ಪ್ರಜ್ವಲ್‌ 2-3 ಬಾರಿ ವಿಮಾನ ಟಿಕೆಟ್‌ ರದ್ದುಗೊಳಿಸಿದ್ದಾನೆ. ಹೀಗಾಗಿ ಕೋರ್ಟ್‌ ಮೂಲಕ ಪ್ರಜ್ವಲ್‌ನ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಲು ಎಸ್‌ಐಟಿ ಚಿಂತನೆ ನಡೆಸಿದೆ. ಈ ಸಂಬಂಧ ಎಸ್‌ಐಟಿ ಸಭೆ ಕೂಡ ನಡೆಸಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ