Breaking News

ಹೋರ್ಡಿಂಗ್‌ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Spread the love

ಮುಂಬಯಿ: ಬಿರುಗಾಳಿ ಸಹಿತ ಮಳೆಯ ಅವಾಂತರಕ್ಕೆ ಸೋಮವಾರ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಪೆಟ್ರೋಲ್ ಬಂಕ್ ಮೇಲೆ ದೈತ್ಯ ಜಾಹೀರಾತು ಫಲಕ ಬಿದ್ದ ಪ್ರಕರಣದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಅಲ್ಲದೆ 74 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Mumbai: ಹೋರ್ಡಿಂಗ್‌ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

ನಗರದಲ್ಲಿ ಸೋಮವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು ಧರೆಗುರುಳಿವೆ, ಅಲ್ಲದೆ ಜನಜೀವನ ಅಸ್ತವ್ಯಸ್ತಗೊಂಡಿದೆ, ಇದೆ ವೇಳೆ ಪಂತನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಬಳಿ ಇರುವ ಪೆಟ್ರೋಲ್ ಬಂಕ್ ಮೇಲೆ ಅತೀ ದೊಡ್ಡ ಹೋರ್ಡಿಂಗ್ ಕುಸಿದು ಬಿದ್ದ ಪರಿಣಾಮ ಪೆಟ್ರೋಲ್ ಬಂಕ್ ಸೇರಿದಂತೆ ಹಲವಾರು ಕಾರುಗಳ ಮೇಲೆ ಬಿದ್ದಿದೆ ಪರಿಣಾಮ ಎಪ್ಪತ್ತಕ್ಕೂ ಹೆಚ್ಚು ಮಂದಿ ಅವಶೇಷಗಳಿ ಸಿಲುಕಿದ್ದರು ಕೂಡಲೇ ಕಾರ್ಯಪ್ರವೃತ್ತರಾದ ರಕ್ಷಣಾ ತಂಡ ಅವಶೇಷಗಳಡಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಈ ಅವಘಡದಲ್ಲಿ ಇದುವರೆಗೆ ಸುಮಾರು ಹದಿನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು ಜೊತೆಗೆ 74 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ ಘಟನಾ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೋರ್ಡಿಂಗ್ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಹದಿನಾಲ್ಕು ಜನರ ಜೀವ ತೆಗೆದುಕೊಂಡ ಹೋರ್ಡಿಂಗ್ಸ್ ಅಳವಡಿಸಿದ್ದ ಅದರ ಮಾಲೀಕ ಭವೇಶ್ ಭಿಡೆ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭವೇಶ್ ಭಿಂಡೆ ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ