Breaking News

ಚಿಕ್ಕೋಡಿ | ಬೆಟ್ಟಿಂಗ್‌: ಹೊಡೆದಾಡಿಕೊಂಡ ಕಾರ್ಯಕರ್ತರು

Spread the love

ಚಿಕ್ಕೋಡಿ: ಲೋಕಸಭೆಗೆ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಬೆಟ್ಟಿಂಗ್ ಅವ್ಯಾಹತವಾಗಿ ನಡೆದಿದೆ. ಪಟ್ಟಣದ ಮದ್ಯದ ಅಂಗಡಿ ಎದುರು ಸೋಮವಾರ ಇಬ್ಬರು ಕಾರ್ಯಕರ್ತರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ.ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

 

ಈ ಬಾರಿ ಕಾಂಗ್ರೆಸ್‌ನ ಹಾಗೂ ಬಿಜೆಪಿಯ  ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎರಡೂ ಕಡೆಯ ಅಭಿಮಾನಿಗಳು ಸಾವಿರ, ಹತ್ತು ಸಾವಿರ, ಲಕ್ಷ ಹೀಗೆ ಬೆಟ್ಟಿಂಗ್‌ ಕಟ್ಟಿದ್ದಾರೆ ಎಂಬ ಮಾತು ಎಲ್ಲೆಡೆ ಹರಿದಾಡುತ್ತಿವೆ. ಇದೇ ಕಾರಣಕ್ಕೆ ಸೋಮವಾರ ಇಬ್ಬರು ಕಾರ್ಯಕರ್ತರ ಮಧ್ಯೆ ಜಗಳ ನಡೆದಿದೆ. ಈ ಬಗ್ಗೆ ಇಬ್ಬರೂ ದೂರು ಕೊಟ್ಟಿಲ್ಲ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ