Breaking News

ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Spread the love

ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

ಸಿದ್ದಾಪುರ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸಿದ್ದಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್‌ ಶೆಟ್ಟಿ (38) ಮೃತಪಟ್ಟವರು.Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

ಮಂಗಳವಾರ ಸಂಜೆ ಸಿದ್ದಾಪುರದಲ್ಲಿ ಸಿಡಿಲು ಸಹಿತ ಮಳೆಯಾಗಿದ್ದು, ಈ ಸಂದರ್ಭ ಸುರೇಶ್‌ ಅವರು ತನ್ನ ಕಿರಿಯ ಮಗನೊಂದಿಗೆ ಮನೆ ಸಮೀಪವೇ ಇದ್ದ ಮಾವಿನ ಮರದಿಂದ ಬಿದ್ದ ಮಾವಿನಹಣ್ಣು ತರಲು ತೆರಳಿದ್ದರು.

ಆಗ ಭಾರೀ ಶಬ್ದದೊಂದಿಗೆ ಸಿಡಿಲು ಎರಗಿದ್ದು, ಅದು ಸುರೇಶ್‌ ಅವರ ಎದೆಯ ಭಾಗಕ್ಕೆ ಬಡಿದಿದೆ. ತಂದೆ ಬಿದ್ದಿರುವುದನ್ನು ಗಮನಿಸಿ ಮಗು ಮನೆಗೆ ಓಡಿ ಹೋಗಿ ಮನೆಯವರಿಗೆ ವಿಷಯ ತಿಳಿಸಿತು.

ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಬದುಕಿಸುವ ಪ್ರಯತ್ನ ಮಾಡಲಾಗಿತ್ತಾದರೂ ಇದೇ ವೇಳೆ ಸಿದ್ಧಾಪುರ ಭಾಗದಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಎದುರಾಗಿದ್ದರಿಂದ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಆಸ್ಪತ್ರೆಗೆ ಕರೆದೊಯ್ಯಲು ವಿಳಂಬವಾಗಿದ್ದರಿಂದ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.

ನಾಳೆ ಮಗುವಿನ ಜನ್ಮದಿನ
ಸುರೇಶ್‌ ಅವರ ಎರಡನೇ ಪುತ್ರನ ನಾಲ್ಕನೇ ವರ್ಷದ ಹುಟ್ಟುಹಬ್ಬ ಮೇ 16ರಂದು ನಡೆಯಲಿಕ್ಕಿತ್ತು. ಅದಕ್ಕಾಗಿಯೇ ಅವರು ಬೆಂಗಳೂರಿನಿಂದ ಬಂದು ಮನೆಯವರ ಜತೆ ಸಿದ್ಧತೆಯನ್ನೂ ನಡೆಸಿದ್ದರು. ಈ ನಡುವೆ ಕುಟುಂಬವನ್ನೇ ಸಿಡಿಲು ಕಣ್ಣೀರಿನಲ್ಲಿ ಮುಳುಗಿಸಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ