Breaking News

ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 29 ಮಂದಿ ನಾಮಪತ್ರ ಸಲ್ಲಿಕೆ

Spread the love

ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನವಷ್ಟೇ ಬಾಕಿ ಇದ್ದು, ಈವರೆಗೆ 29 ಅಭ್ಯರ್ಥಿಗಳಿಂದ 40 ನಾಮಪತ್ರಗಳು ಸಲ್ಲಿಕೆಯಾಗಿವೆ.

ಒಟ್ಟು 28 ಪುರುಷರು, ಒರ್ವ ಮಹಿಳೆ ಸೇರಿದಂತೆ 29 ಅಭ್ಯರ್ಥಿಗಳು 40 ಉಮೇದುವಾರಿಕೆಗಳನ್ನು ಸಲ್ಲಿಸಿದ್ದಾರೆ.Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

ಇದರಲ್ಲಿ ಬಿಜೆಪಿಯಿಂದ 3, ಕಾಂಗ್ರೆಸ್‌ನಿಂದ 5, ಜೆಡಿಎಸ್‌ನಿಂದ 1 ಹಾಗೂ 20 ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ 12, ಬೆಂಗಳೂರು ಪದವೀಧರ ಕ್ಷೇತ್ರದಿಂದ 8, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ 6, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ 6, ನೈಋತ್ಯ ಪದವೀಧರ ಕ್ಷೇತ್ರದಿಂದ 3, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 5 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನವಾಗಿದ್ದು, ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಮೇ 20 ಕೊನೆ ದಿನವಾಗಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ