Breaking News

ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

 

ಉತ್ತಮ ವಾತಾವರಣ

ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.

ಪರಿಣಾಮ ಬೀರುವುದಿಲ್ಲ: ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ