ಬೆಂಗಳೂರು, ಮೇ 06: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳ ಬೇಡಿಕೆಯಂತೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 15ರ ತನಕ ವಿಸ್ತರಣೆ ಮಾಡಲಾಗಿದೆ.
ಕಂದಾಯ ಇಲಾಖೆ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಕೆಇಎ ಮೂಲಕ ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ.