ಬೆಂಗಳೂರು: ನಗರದ ಖಾಸಗಿ ಕಾಲೇಜುವೊಂದರ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು 21 ವರ್ಷದ ಯುವಕ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಬಳ್ಳಾರಿ ಮೂಲದ ಸಿ ರಾಹುಲ್ ಎಂದು ಗುರುತಿಸಲಾಗಿದೆ. ಮೂರನೇ ವರ್ಷದ ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಹುಲ್ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ.
ಅವರ ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಾರೆ ಎಂಬುದು ತಿಳಿದುಬಂದಿದೆ.
ತಡವಾಗಿ ಬಂದಿದ್ದರಿಂದ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ್ದರಿಂದ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾನೆ ಎನ್ನಲಾಗಿದೆ. ಆತ ಆರನೇ ಸೆಮಿಸ್ಟರ್ ಪರೀಕ್ಷೆಯ ಮೊದಲ ಪತ್ರಿಕೆಯನ್ನು ಬರೆಯಬೇಕಿತ್ತು. ಕ್ಯಾಂಪಸ್ ಪ್ಲೇಸ್‌ಮೆಂಟ್‌ಗಳಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ರಾಹುಲ್‌ಗೆ ಹೇಳಲಾಗಿತ್ತು ಎಂದು ಆರೋಪಿಸಲಾಗಿದೆ.
Laxmi News 24×7