ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಹುಬ್ಬಳ್ಳಿ ನಿವಾಸಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಕುರಿತು ಮಾತನಾಡಿದ ಅವರು ಅಂಬಿಗೇರ ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪದೇ ಪದೇ ವಿಫಲವಾಗುತ್ತಿದೆ. ಈ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಕೂಡಲೇ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು. ಇಂತಹ ಘಟನೆಗಳು ಪುನರಾವರ್ತಿತ ಆಗುತ್ತಿರುವ ಹಿನ್ನೆಲೆಯಲ್ಲಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
Laxmi News 24×7