Breaking News

ಮೋದಿ ವಿರುದ್ಧ ಕಣಕ್ಕಿಳಿದಿದ್ದವನ ನಾಮಪತ್ರ ರಿಜೆಕ್ಟ್!!

Spread the love

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಸೇರಿದಂತೆ 33 ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.

ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರಕ್ಕೆ 40 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು.

ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ವೀಡಿಯೊಗಳಿಗೆ ಹೆಸರುವಾಸಿಯಾಗಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಮೇ 14ರಂದು ವಾರಣಾಸಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದರು.LOK SABHA ELECTION: ಮೋದಿ ವಿರುದ್ಧ ಕಣಕ್ಕಿಳಿದಿದ್ದವನ ನಾಮಪತ್ರ ರಿಜೆಕ್ಟ್!!

ಇದೀಗ ಶ್ಯಾಮ್‌ ರಂಗೀಲಾ ಸೇರಿದಂತೆ 33 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ವಾರಣಾಸಿಯಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ. ಕೊನೆಯ ಹಂತಕ್ಕೆ ನಾಮಪತ್ರ ಸಲ್ಲಿಸಲು ಮೇ 14 ಕೊನೆಯ ದಿನವಾಗಿತ್ತು. ಮೇ 15 ರಂದು ನಾಮಪತ್ರಗಳನ್ನು ಪರಿಶೀಲಿಸಲಾಯಿತು.


Spread the love

About Laxminews 24x7

Check Also

ಕೇತಗಾನಗಳ್ಳಿ ಸರ್ಕಾರಿ ಜಮೀನು ಒತ್ತುವರಿ; 10 ದಿನಗಳಲ್ಲಿ ಒತ್ತುವರಿ ಕುರಿತು ವರದಿ ಸಲ್ಲಿಸಲು ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು : ರಾಮನಗರದ ಕೇತಗಾನಹಳ್ಳಿಯ ವಿವಿಧ ಸರ್ವೇ ಸಂಖ್ಯೆಗಳಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಗೋಮಾಳ ಜಮೀನು ತೆರವಿಗೆ ಸಂಬಂಧಿಸಿದಂತೆ ಮುಂದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ