Breaking News

ಬೆಳೆ ಪರಿಹಾರಕ್ಕೆ ಆಗ್ರಹ: ರೈತರಿಂದ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬೀಗ

Spread the love

ಕಾಗವಾಡ: ಬರ ಪರಿಹಾರಕ್ಕೆ ಆಗ್ರಹಿಸಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ರೈತರು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬೀಗ ಜಡಿದು ಮಂಗಳವಾರ ಪ್ರತಿಭಟನೆ ನಡೆಸಿದರು.

‘ಗ್ರಾಮದಲ್ಲಿ ಒಂದು ಸಾವಿರಕ್ಕೂ ಅಧಿಕ ರೈತರಿದ್ದೇವೆ. ಕೇವಲ ಶೇ 10% ರಷ್ಟು ರೈತರಿಗೆ ಮಾತ್ರ ಬರ ಪರಿಹಾರ ನೀಡಲಾಗಿದೆ.

ಬೆಳೆ ಪರಿಹಾರಕ್ಕೆ ಆಗ್ರಹ: ರೈತರಿಂದ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬೀಗ

ಈ ಕುರಿತು ಗ್ರಾಮ ಲೆಕ್ಕಾಧಿಕಾರಿಗಳನ್ನು ವಿಚಾರಿಸಿದರೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ’ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

‘ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ, ಎಲ್ಲರಿಗೂ ಬೆಳೆ ಪರಿಹಾರ ಒದಗಿಸಬೇಕು. ಅಲ್ಲಿಯವರೆಗೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ತೆರೆಯಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ವಿಜಯ ಅಕಿವಾಟೆ, ಭೀಮು ಭೋಲೆ, ಅಜಿತ್ ಕಾಗವಾಡೆ, ಪ್ರಲ್ಹಾದ ಪಾಟೀಲ, ಅಪ್ಪಾಸಾಬ ಚೌಗುಲೆ, ಗಣೇಶ ಪಾಟೀಲ, ಅಕ್ಷಯ ಪಾಟೀಲ, ದೀಪಕ ಮಾಂಗೂರೆ, ಅಜೀತ ತುಪಳೆ, ಅಭಿನಂದನ ಚೌಗುಲೆ ಇದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ