Breaking News

ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ

Spread the love

ದಗ: ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

 

ದಗನಲ್ಲಿ‌ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ‌ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರೆ ಈ ಕೊಲೆ ತಪ್ಪಿಸಬಹುದಿತ್ತು. ಕೊಲೆಯನ್ನು ತಡೆಯದೇ ಪರೋಕ್ಷವಾಗಿ ಕೊಲೆಗೆ ಪೊಲೀಸರು ಕಾರಣರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ