Breaking News

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಮಾಜಿ ಪ್ರಧಾನಿ H.D. ದೇವೇಗೌಡ ತೀರ್ಮಾನ

Spread the love

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮೇ 18ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಕಾಲಿಡಲಿದ್ದು, ಆದರೆ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ.

ಈ ಕುರಿತಂತೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ.BIG NEWS: ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಮಾಜಿ ಪ್ರಧಾನಿ H.D. ದೇವೇಗೌಡ ತೀರ್ಮಾನ

ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ದೇವೇಗೌಡರು ಕೋರಿಕೊಂಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ