ಚಿತ್ರದುರ್ಗ, ಮೇ.16: ನಗರದ ಚಳ್ಳಕೆರೆ (Challakere) ಗೇಟ್ ಸಮೀಪದ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಜಗನ್ನಾಥರೆಡ್ಡಿ ಎಂಬುವವರ ಮನೆಯಲ್ಲಿ 2023ರ ಡಿಸೆಂಬರ್ 28ರಂದುಐವರ ಅಸ್ಥಿಪಂಜರ(Skeleton) ಪತ್ತೆಯಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್(FSL) ರಿಪೋರ್ಟ್ ಬಂದಿದ್ದು, ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ಈ ವರದಿಯಲ್ಲಿ ಸಾವಿನ ಕುರಿತು ಸತ್ಯಾಂಶ ಬಯಲಾಗಿದೆ.
ಎಸ್ಪಿ ಹೇಳಿದ್ದಿಷ್ಟು
ಇನ್ನು ಈ ಕುರಿತು ಮಾತನಾಡಿದ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, ‘ಚಿತ್ರದುರ್ಗದ ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್‌ಎಸ್‌ಎಲ್ ರಿಪೋರ್ಟ್ ಬಂದಿದೆ. ಅದರಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇನ್ನು 2023ರ ಡಿಸೆಂಬರ್ 28ರಂದು ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಹಾಗೂ ನರೇಂದ್ರರೆಡ್ಡಿ ಸೇರಿದಂತೆ ಐವರ ಅಸ್ಥಿಪಂಜರ ಪತ್ತೆ ಆಗಿದ್ದವು. ಇದೀಗ ಎಫ್‌ಎಸ್‌ಎಲ್ ವರದಿ ಬಂದಿದೆ ಎಂದರು.
Laxmi News 24×7