ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್ಡಿ ರೇವಣ್ಣಗೆ (HD Revanna) ನೀಡಿದ್ದ ಮಧ್ಯಂತರ ಜಾಮೀನನ್ನ ಕೋರ್ಟ್ ಸೋಮವಾರದವರೆಗೆ ಮುಂದುವರಿಸಿದೆ. ಶುಕ್ರವಾರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ವಿಚಾರಣೆ ಮುಂದುವರಿಸಿದ 42ನೇ ಸೆಷನ್ ನ್ಯಾಯಾಲಯ ಕೋರ್ಟ್ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಅಲ್ಲಿಯವರೆಗೆ ರೇವಣ್ಣಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ತಿಳಿಸಿದೆ. ರೇವಣ್ಣ ಪರ ಸಿವಿ ನಾಗೇಶ್, ಐಎಸ್ಟಿ ಎಸ್ ಪಿಪಿ ಜಾಯ್ನಾ ಕೊಠಾರಿ ವಾದ ಮಂಡಿಸಿದರು.
ಮೇ 20ಕ್ಕೆ ರೇವಣ್ಣ ಭವಿಷ್ಯ ನಿರ್ಧಾರ
ಎಚ್.ಡಿ.ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ಮನೆಕೆಲಸದಾಕೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಜಾಮೀನಿಗಾಗಿ ಎಚ್ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಗುರುವಾರದಿಂದ ವಿಚಾರಣೆ ನಡೆಸುತ್ತಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ಕ್ಕೆ ಕಾಯ್ದಿರಿಸಿದೆ. ಅಲ್ಲಿಯವರೆಗೆ ಈಗ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯುತ್ತದೆ ಎಂದು ತಿಳಿಸಿದೆ.
Laxmi News 24×7