ಹುಕ್ಕೇರಿ: ‘ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ಗೆದ್ದ ನಂತರ ನಮ್ಮ ಜವಾಬ್ದಾರಿಯೂ ಹೆಚ್ಚಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದ 30 ವರ್ಷಗಳಿಂದ ನಾವು ಜನರ ಸಂಪರ್ಕದಲ್ಲಿ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿದ್ದೇವೆ.
ಆದರೆ ಪ್ರಿಯಂಕಾ ಜಾರಕಿಹೊಳಿ ಗೆದ್ದ ಮೇಲೆ ಇನ್ನಷ್ಟು ನಮ್ಮ ಕಾರ್ಯವ್ಯಾಪ್ತಿ ವಿಸ್ತರಿಸಲಿದೆ’ ಎಂದು ತಿಳಿಸಿದರು.
Laxmi News 24×7