Breaking News

55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Spread the love

ಣಜಿ: ನವೆಂಬರ್ ತಿಂಗಳಲ್ಲಿ ನಡೆಯಲಿರುವ 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್‍ಎಫ್‍ಐ) ಪೋಸ್ಟರ್ ಪ್ರಸ್ತುತ ನಡೆಯುತ್ತಿರುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಅನಾವರಣಗೊಳಿಸಲಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್‌ 20-28 ರವರೆಗೆ ಪಣಜಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

ಭಾರತವು ಪ್ರತಿ ವರ್ಷ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತದೆ. ಈ ವರ್ಷ, ಕೇನ್ಸ್ ನಲ್ಲಿ ನಡೆದ ಈ ಉತ್ಸವದಲ್ಲಿ ‘ಇಂಡಿಯಾ ಪೆವಿಲಿಯನ್’ ಅನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಕಾರ್ಯದರ್ಶಿ ಸಂಜಯ್ ಜಾಜು, ಫ್ರಾನ್ಸ್‌ನರುವ ಭಾರತದ ರಾಯಭಾರಿ ಜಾವೇದ್ ಅಶ್ರಫ್ ಉಪಸ್ಥಿತರಿದ್ದರು.

ನೆಟ್‍ವರ್ಕಿಂಗ್‌, ದೇವ್‍ಘೇವ್ ಮತ್ತು ಭಾರತೀಯ ಸಿನಿಮಾವನ್ನು ಉತ್ತೇಜಿಸುವಲ್ಲಿ ಇಂಡಿಯಾ ಪೆವಿಲಿಯನ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಂಜಯ್ ಜಾಜು ಹೇಳಿದ್ದಾರೆ.

ಕೇನ್ಸ್ ಚಲನಚಿತ್ರೋತ್ಸವದಲ್ಲಿ ಇಂಡಿಯಾ ಪೆವಿಲಿಯನ್ ಉದ್ಘಾಟನೆ ಭಾರತೀಯ ಚಲನಚಿತ್ರೋದ್ಯಮಕ್ಕೆ ಮಹತ್ವದ ಕ್ಷಣವಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ