Breaking News

ಯಾವ ನೋಟಿಸ್ ಗು ಬಗ್ಗದ ಪ್ರಜ್ವಲ್ : ಇದೀಗ ಕೋರ್ಟ್ ಮೂಲಕ ‘ವಾರೆಂಟ್’ ಜಾರಿಗೆ ‘SIT’ ಸಿದ್ಧತೆ

Spread the love

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇಶದಿಂದ ದೇಶಕ್ಕೆ ಜಿಗಿಯುತ್ತ ತಲೆಮರಿಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಎಸ್‌ಐಟಿ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಕೋರ್ಟ್ ಮೂಲಕ ವಾರೆಂಟ್ ಜಾರಿ ಮಾಡುವ ಮುಖಾಂತರ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಯಾವ ನೋಟಿಸ್ ಗು ಬಗ್ಗದ ಪ್ರಜ್ವಲ್ : ಇದೀಗ ಕೋರ್ಟ್ ಮೂಲಕ 'ವಾರೆಂಟ್' ಜಾರಿಗೆ 'SIT' ಸಿದ್ಧತೆ

ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ಗೆ ವಿಚಾರಣೆಗೆ ಹಾಜರಾಗುವಂತೆ ಹಲವಾರು ಬಾರಿ ನೋಟಿಸ್ ನೀಡಿದ್ದರು. ಅಲ್ಲದೆ ಸಿಐಡಿ ಮುಖಾಂತರ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಆದರೂ ಕೂಡ ಪ್ರಜ್ವಲ್ ರೇವಣ್ಣ ಯಾವುದೇ ನೋಟಿಸ್ ಗೂ ಸರಿಯಾದ ರೀತಿ ಸ್ಪಂದಿಸಲಿಲ್ಲ. ಹಾಗಾಗಿ ಇದೀಗ ಕೋರ್ಟ್ ಮುಖಾಂತರ ವಾರಂಟ್ ಜಾರಿ ಮಾಡಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್ ಬ್ಯಾಂಕ್ ಖಾತೆ ಬಂದ್ ಮಾಡಲು ಮುಂದಾದ SIT

ಸದ್ಯ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಜರ್ಮನ್ ನಿಂದ ಲಂಡನ್ ಗೆ ಪ್ರಯಾಣಿಸಿ ಅಲ್ಲಿ ವಾಸ್ತವ್ಯ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ. ಈ ನಡುವೆ ಪ್ರಜ್ವಲ್‌ ರೇವಣ್ಣನವರ ಬ್ಯಾಂಕ್‌ ಖಾತೆಗೆ ಭಾರತದಿಂದ ಹಣವನ್ನು ಹಾಕಿದ್ದಾರೆ ಎನ್ನಲಾಗಿದೆ. ಈ ನಡುವೆ ಪ್ರಜ್ವಲ್‌ ರೇವಣ್ಣನೊಂದಿಗೆ ಇಬ್ಬರು ಸ್ನೇಹಿತರು ಕೂಡ ಇದ್ದು, ಅದರಲ್ಲಿ ಒಬ್ಬರು ಬೆಂಗಳೂರಿನವರು, ಮತ್ತೊಬ್ಬರು ದುಬೈ ಮೂಲದವರು ಎನ್ನಲಾಗಿದೆ.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ