Breaking News

ಬೆಳಗಾವಿ: ರೈಲ್ವೆ ಸಿಬ್ಬಂದಿ ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ

Spread the love

ಬೆಳಗಾವಿ: ‘ಚಲಿಸುತ್ತಿದ್ದ ರೈಲಿನಲ್ಲಿ ಚಾಕುವಿನಿಂದ ಇರಿದು ಒಬ್ಬ ಸಿಬ್ಬಂದಿಯನ್ನು ಕೊಲೆ ಮಾಡಿ, ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಪರಾರಿಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆಗೊಳಗಾದ ಸಿಬ್ಬಂದಿ ಆರೋಪಿಯನ್ನು ಗುರುತಿಸಿದ್ದು, ಆತನ ಮುಖದ ರೇಖಾಚಿತ್ರ ಕೂಡ ಸಿದ್ಧಪಡಿಸಲಾಗಿದೆ.

ಬೆಳಗಾವಿ: ರೈಲ್ವೆ ಸಿಬ್ಬಂದಿ ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ

‘ಪುದುಚೇರಿ- ದಾದರ್ ಎಕ್ಸ್‌ಪ್ರೆಸ್‌ ರೈಲು ಗುರುವಾರ ಸಂಜೆ 4ರ ಸುಮಾರಿಗೆ ಖಾನಾಪುರ ತಾಲ್ಲೂಕಿನ ಲೋಂಡಾ ಬಳಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರೈಲು ಖಾನಾಪುರ ನಿಲ್ದಾಣಕ್ಕೆ ಬಂದಾಗ ಆರೋಪಿ ಪರಾರಿಯಾದ. ಎಸ್‌-8 ಬೋಗಿಯಿಂದ ಇಳಿದುಹೋಗಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಖಾನಾಪುರದಿಂದ ಎಲ್ಲಿಗೆ ಪರಾರಿಯಾಗಿದ್ದಾನೆ ಎಂಬುದರ ತನಿಖೆ ನಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

‘ರೈಲಿನಲ್ಲಿ ಟಿಕೆಟ್‌ ಪರಿವೀಕ್ಷಕ (ಟಿಟಿಇ) ಅಶ್ರಫ್‌ ಕಿತ್ತೂರ ಟಿಕೆಟ್‌ ತಪಾಸಣೆ ಮಾಡುತ್ತಿದ್ದರು. ಆಗ ಮುಸುಕುಧಾರಿಯಾಯಾಗಿದ್ದ ಪ‍್ರಯಾಣಿಕ ಚಾಕುವಿನಿಂದ ಹಲ್ಲೆ ಮಾಡಿದ. ಟಿಟಿಇ ನೆರವಿಗೆ ಬಂದ ಆನ್‌ ಮೋಡ್‌ ಹೌಸ್‌ಕೀಪಿಂಗ್‌ ಸ್ಟಾಫ್‌ ದೇವ‌ರ್ಷಿ ವರ್ಮಾ (23) ಅವರ ಎದೆಗೆ ಚಾಕುವಿನಿಂದ ಇರಿದ. ದೇವರ್ಷಿ ವರ್ಮಾ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಟಿಟಿಇ ಸೇರಿ ನಾಲ್ವರು ಗಾಯಾಳುಗಳು ಚಿಕಿತ್ಸೆ ಪಡೆದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ