ಬೆಂಗಳೂರು: ಇಂದು ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರಿಗೆ ಕೊರೊನಾ ಸೋಂಕು ನೆಗಟಿವ್ ಬಂದಿದೆ ಎಂದು ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಇಂದು ಮಧ್ಯಾಹ್ನ 3.48ರ ಸುಮಾರಿಗೆ ಚಿರಂಜೀವಿ ಸರ್ಜಾ ಅವರು ಬೆಂಗಳುರಿನ ಅಪೊಲೋ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಈಗ ಈ ವಿಚಾರವಾಗಿ ಅಪೊಲೋ ಆಸ್ಪತ್ರೆ ವೈದ್ಯರು ಮೆಡಿಕಲ್ ವರದಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಮೂರು ಬಾರಿ ಸಿಪಿಆರ್ ಚಿಕಿತ್ಸೆಯಲ್ಲಿ ಯಶಸ್ವಿಯಾದರೂ ಚಿರು ಅವರಿಂದ ಸ್ಪಂದನೆ ಸಿಗಲಿಲ್ಲ ಎಂದಿದ್ದಾರೆ.
ಆಸ್ಪತ್ರೆಯಲ್ಲಿ ಅಡ್ಮಿಟ್ ಆದ ದಿನವೇ ರೋಗಿ ಮೃತಪಟ್ಟರೆ ಕೋವಿಡ್ 19 ಪರೀಕ್ಷೆ ಮಾಡಲಾಗುತ್ತದೆ. ಹೀಗಾಗಿ ಚಿರಂಜೀವಿ ಅವರ ಗಂಟಲು ದ್ರವವನ್ನು ಕೊರೊನಾ ಟೆಸ್ಟ್ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಚಿರು ಅವರಿಗೆ ಕೊರೊನಾ ಟೆಸ್ಟ್ ನೆಗಟಿವ್ ಬಂದಿದೆ ಎಂದು ಅಪೊಲೊ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಮಧ್ಯಾಹ್ನ 2.20ಕ್ಕೆ ಆಸ್ಪತ್ರೆಗೆ ಕರೆಯಲಾಯಿತು. ತಕ್ಷಣವೇ ಎಮರ್ಜೆನ್ಸಿ ವಾರ್ಡ್‍ಗೆ ಶಿಫ್ಟ್ ಮಾಡಿ, ದೇಹದ ಉಷ್ಣಾಂಶ, ನಾಡಿಮಿಡಿತ, ಕಣ್ಣಿನ ತಪಾಸಣೆ ಮಾಡಿದಾಗ ಸ್ಪಂದನೆ ಇರಲಿಲ್ಲ. ಅತ್ಯಾಧುನಿಕ ತಂತ್ರಜ್ಞಾನ ಉಪಕರಣ ಬಳಸಿ ಎದೆಯೊತ್ತಿ ಉಸಿರು ನೀಡುವ ಸಿಪಿಆರ್ ಚಿಕಿತ್ಸೆ ಆರಂಭಿಸಲಾಯಿತು. 3.48ರವರೆಗೆ ಈ ಪ್ರಕ್ರಿಯೆ ನಡೆಯಿತು. ಮೂರು ಬಾರಿ ಸಿಪಿಆರ್ ಚಿಕಿತ್ಸೆಯಲ್ಲಿ ಯಶಸ್ವಿಯಾದರೂ ಬಳಿಕ ಸ್ಪಂದನೆ ಸಿಗಲಿಲ್ಲ. ಹಾಗಾಗಿ, 3.48ಕ್ಕೆ ಚಿರಂಜೀವಿ ಸರ್ಜಾ ನಿಧನರಾಗಿದ್ದಾರೆ ಎಂಬುದಾಗಿ ಪ್ರಕಟಿಸಲಾಯಿತು ಅಂತ ಅಪೋಲೋ ಆಸ್ಪತ್ರೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
sಶನಿವಾರ ರಾತ್ರಿಯೇ ಚಿರುಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮಧ್ಯಾಹ್ನ ಕೂಡ ಮತ್ತೆ ಎದೆನೋವು ಕಾಣಿಸಿಕೊಂಡ ಬಳಿಕ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
https://youtu.be/zw1eCpO05sI