Breaking News

ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

Spread the love

ಬೆಳಗಾವಿ: ‘ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಆರೋಪಿ ಗಿರೀಶ ಸಾವಂತಗೆ ಗಲ್ಲುಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿ ನಗರದಲ್ಲಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದವರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಅವರು, ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ಮೆರವಣಿಗೆ ನಡೆಸಿದರು.ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.

‘ಅಂಜಲಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಕುರಿತು ಪೊಲೀಸರಿಗೆ ಮೌಖಿಕವಾಗಿ ದೂರು ನೀಡಲಾಗಿತ್ತು. ಅವರು ನಿರ್ಲಕ್ಷ್ಯ ತೋರಿದ್ದರಿಂದ ಹತ್ಯೆಯಾಯಿತು. ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾದ ಸಂದರ್ಭವೇ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದರೆ, ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ’ ಎಂದು ಆರೋಪಿಸಿದರು.

ವಿಧಾನ ಪರಿಷತ್‌ ಸದಸ್ಯ ಸಾಬಣ್ಣ ತಳವಾರ, ‘ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಎರಡನೇ ಕೊಲೆ ಇದಾಗಿದೆ. ಈ ಬೆಳವಣಿಗೆ ಗಮನಿಸಿದರೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಅಂಜಲಿ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಅಂಜಲಿ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರ ಪರಿಹಾರ ವಿತರಿಸಬೇಕು’ ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ