Breaking News

ಶಾಲಾರಂಭಕ್ಕೆ ಭರದ ಸಿದ್ಧತೆ

Spread the love

ಉಡುಪಿ: ಉಭಯ ಜಿಲ್ಲೆಗಳಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಮೇ 29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ. ಸರಕಾರಿ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಬೇಕಾದ ತಯಾರಿಯೂ ಆಗುತ್ತಿದೆ.

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಶಾಲೆಗಳಿಗೆ ಅಗತ್ಯವಿರುವ ಪಠ್ಯಪುಸ್ತಕ ಹಾಗೂ ಸಮವಸ್ತ್ರದ ಮಾಹಿತಿಯನ್ನು ಈಗಾಗಲೇ ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. ಅದರಂತೆ ಉಡುಪಿಗೆ ಶೇ. 47.67ರಷ್ಟು ಹಾಗೂ ದ.ಕ. ಜಿಲ್ಲೆಗೆ ಶೇ. 44.68ರಷ್ಟು ಪುಸ್ತಕ ಬಿಇಒ ಕಚೇರಿಗಳಿಗೆ ಪೂರೈಕೆಯಾಗಿದೆ. ಸಮವಸ್ತ್ರ ಕೆಲವು ಜಿಲ್ಲೆಗಳಿಗೆ ಇನ್ನೂ ಬಂದಿಲ್ಲ. ದ.ಕ. ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ವಿತರಿಸಲು ತಲಾ 2 ಜೊತೆ ಸಮವಸ್ತ್ರ ಪೂರೈಕೆಯಾಗಿದೆ. ಉಡುಪಿ ಜಿಲ್ಲೆಗೆ ಇನ್ನಷ್ಟೇ ಪೂರೈಕೆಯಾಗಬೇಕಿದೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ