ಹುಬ್ಬಳ್ಳಿ : ಸರ್ಕಾರ ದಕ್ಷ ಪೊಲೀಸ್ ಅಧಿಕಾರಿ ನೇಮಿಸಬೇಕು. ಸರ್ಕಾರಕ್ಕೆ ಧಮ್ಮ ಇಲ್ಲ, ಅಂದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಮೃತ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ್ ಹಿರೇಮಠ (niranjan hiremath) ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಾರ್ಡ್ನಲ್ಲಿ ಎರಡು ಕೊಲೆಗಳು ಆಗಿವೆ.
ಮೊದಲು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಅಂಜಲಿ ಯುವತಿಯ ಕೊಲೆ ನಡೆಯಿತು. ಒಟ್ಟಾರೆ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ಇದೊಂದು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ. ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ನಮ್ಮ ಜನಾಂಗಕ್ಕೆ ಜನರು ಬೆಲೆ ಕೊಡುತ್ತಾರೆ. ಆದರೆ ಕೆಲವರು ರಾಜಕೀಯ ಮಾಡಿ ಈ ರೀತಿ ಮಾಡುತ್ತಿದ್ದಾರೆ. ಕಾಣದ ಕೈ ಕೆಲಸ ಮಾಡುತ್ತಿವೆ. ಜನರೆ ನನ್ನ ಕೈ ಹಿಡಿದಿದ್ದಾರೆ. ನನ್ನ ವಾರ್ಡ್ನಲ್ಲೇ ಅಕ್ರಮ ಚಟುವಟಿಕೆ ಮಾಡುತ್ತಿದ್ದಾರೆ ಎಂದರು.