ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಗಂಟೆಗೆ ಕನಕಪುರ ರಸ್ತೆ ಬಳಿಯಿರೋ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
‘ಅಣ್ಣ ಸದಾ ನನ್ನ ಜೊತೆಗಿರಬೇಕು, `ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗ್ಲಿ’ ಎಂದು ಸಹೋದರ ದೃವ ಸರ್ಜಾ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕನಕಪುರ ರಸ್ತೆ ಬಳಿಯಿ ನೆಲಗೂಳಿ ಗ್ರಾಮದಲ್ಲಿ ತಮ್ಮ ಧ್ರುವ ಸರ್ಜಾರ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಇಂದು ಬೆಳಗ್ಗೆ 9 ಗಂಟೆವರೆಗೆ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಚಿರು ಅಂತಿಮದರ್ಶನ ನಡೆಯಲಿದೆ. ರಾತ್ರಿಯಿಡೀ ಕುಟುಂಬಸ್ಥರು, ಅಭಿಮಾನಿಗಳೂ ಸೇರಿದಂತೆ ಸಾವಿರಾರು ಮಂದಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಇಂದು ಕೂಡ ಚಿರು ಮನೆಯ ಸುತ್ತ ಜನಸಾಗರವೇ ನೆರೆದಿದೆ.
ಭಾನುವಾರ ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿತ್ತು. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದಾರೆ.
ಚಿರು ಅವರ ಸಾವಿನ ಸುದ್ದಿ ಕೇಳಿ ಇಡೀ ಚಿತ್ರರಂಗವೇ ಶಾಕ್ ಆಗಿದೆ. ನಟರಾದ ದರ್ಶನ್, ಪುನೀತ್ ರಾಜ್‍ಕುಮಾರ್, ಗಣೇಶ್, ನಟಿ ಅಮೂಲ್ಯ ಮುಂತಾದ ಕಲಾವಿದರ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನೂ ನಟಿ ತರಾ, ಸೃಜನ್ ಲೊಕೇಶ್, ಕಿಚ್ಚ ಸುದೀಪ್, ಯಶ್, ರವಿಚಂದ್ರನ್ ಹಾಗೂ ಮತ್ತಿತರ ಗಣ್ಯರು ಆಸ್ಪತ್ರೆಗೆ ಬಂದು ಚಿರುವಿನ ಅಂತಿಮ ದರ್ಶನ ಪಡೆದಿದ್ದಾರೆ.
https://youtu.be/zw1eCpO05sI