Breaking News

ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Spread the love

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಅಸಲಿ ಸಂಕಷ್ಟ ಶುರುವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್‌ ಸೆರೆಗೆ ಎಸ್‌ಐಟಿ ಸರ್ಜಿಕಲ್ ಸ್ಟ್ರೈಕ್‌ ಆರಂಭಿಸಿದ್ದು,

ಇದೀಗಹೊಳೆನರಸೀಪುರ ಕೇಸ್‌ನಲ್ಲಿ(Prajwal Revanna Case) ಪ್ರಜ್ವಲ್‌ ಬಂಧನಕ್ಕೆ ಅರೆಸ್ಟ್ ವಾರಂಟ್ ಪಡೆದಿದೆ.

ಜತೆಗೆ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಕೂಡ ಕೋರ್ಟ್ ಅನುಮತಿ ನೀಡಿದೆ.

ನಗರದ 42ನೇ ಎಸಿಎಂಎಂ ಕೋರ್ಟ್‌, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್‌ ಮಾಹಿತಿ ಕೇಳಿತ್ತು. ಈ ವೇಳೆ ಲುಕ್‌ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್‌ಐಟಿ,

ಬಂಧನಕ್ಕೆ ಚಾರ್ಜ್ ಶೀಟ್ ಅವಶ್ಯಕತೆ ಇಲ್ಲ ಎಂದು ಕೋರ್ಟ್‌ಗೆ ಮನವರಿಕೆ ಮಾಡಿತ್ತು. ಹೀಗಾಗಿ ಕೋರ್ಟ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ