Breaking News

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love

ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ ಮೃತಪಟ್ಟ ಘಟನೆ ನಡೆದಿದೆ.

ಮೂಲತಃ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ನಿವಾಸಿಗಳಾದ ಭುಜೇಂದ್ರ ಹಾಗೂ ದೀಪಾ ದಂಪತಿಯ ಪುತ್ರಿ ಶಿವಾನಿ ಅಜ್ಜಿಯ ಮನೆಗೆ ಬಂದಿದ್ದಳು.

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

ಶುಕ್ರವಾರ ರಾತ್ರಿ ತೋಟದ ಮನೆಯ ಮುಂದೆ ಆಟ ಆಡುವಾಗ ಬಾಲಕಿಯ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ತೆರಳುವಾಗ ಮಾರ್ಗ ಮಧ್ಯದಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ.

ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ