Breaking News

ಕುಡಿಯುವ ನೀರಿಗಾಗಿ ಗ್ರಾ.ಪಂ.ಗೆ ಮುತ್ತಿಗೆ

Spread the love

ರಾದ್: ಕುಡಿಯುವ ನೀರು ಪೂರೈಸಲು ಆಗ್ರಹಿಸಿ ತಾಲ್ಲೂಕಿನ ಕೌಠಾ ಗ್ರಾಮಸ್ಥರು ಶನಿವಾರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಗ್ರಾಮದ ವಾರ್ಡ್ -1ರ ಮಹಿಳೆಯರು ಸೇರಿದಂತೆ ಅನೇಕರು ಸಮಸ್ಯೆ ಹೇಳಿಕೊಳ್ಳಲು ಪಂಚಾಯಿತಿ ಕಚೇರಿಗೆ ಹೋದರು. ಆದರೆ ಸಮಸ್ಯೆಗೆ ಸ್ಪಂದನ ಸಿಗದ ಕಾರಣ ಸ್ಥಳದಲ್ಲೇ ಕೆಲ ಹೊತ್ತು ಧರಣಿ ಕುಳಿತು ಸಂಬಂಧಿತ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.

ಔರಾದ್: ಕುಡಿಯುವ ನೀರಿಗಾಗಿ ಗ್ರಾ.ಪಂ.ಗೆ ಮುತ್ತಿಗೆ

‘ವಾರ್ಡ್-1ರ ಮೂಲಕ ಹಾದು ಹೋದ ಪೈಪ್ ಒಡೆದು ಹೋಗಿದೆ. ಹೀಗಾಗಿ ಟ್ಯಾಂಕಿಗೆ ನೀರು ಹೋಗುತ್ತಿಲ್ಲ. ಇದರಿಂದ ನಮ್ಮ ಗಲ್ಲಿಗೆ ಅನೇಕ ದಿನಗಳಿಂದ ನೀರು ಬರುತ್ತಿಲ್ಲ. ಪಂಚಾಯಿತಿಯವರಿಗೆ ಸಾಕಷ್ಟು ಸಲ ಹೇಳಿದರೂ ಪ್ರಯೋಜನವಾಗಿಲ್ಲ’ ಎಂದು ರಮೇಶ ಬಿರಾದಾರ್ ದೂರಿದರು.

ವಿಷಯ ತಿಳಿದ ಸಂತಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರನ್ನು ಸಮಾಧಾನ ಮಾಡಿ ಆದಷ್ಟು ಬೇಗ ನೀರಿನ ವ್ಯವಸ್ಥೆ ಮಾಡಲು ಭರವಸೆ ನೀಡಿದರು.


Spread the love

About Laxminews 24x7

Check Also

ಬಾಲಕಿಗೆ ಲೈಂಗಿಕ ಕಿರುಕುಳ; ಇಬ್ಬರು ಆಟೋ ಚಾಲಕರ ಬಂಧನ

Spread the loveದಾವಣಗೆರೆ: ಆಟೋ‌ ಚಾಲಕರಿಬ್ಬರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಆರ್​ಎಂಸಿ ಯಾರ್ಡ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ