Breaking News

ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

Spread the love

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ಡಿ ಹುದ್ದೆಗಳ ಹೊರಗುತ್ತಿಗೆ ನೇಮಕದಲ್ಲಿ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ.

ಇದರ ಅನ್ವಯ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕ ಮಾಡಿಕೊಳ್ಳಬೇಕಿದೆ. ಈ ಮೂಲಕ ಹೊರಗುತ್ತಿಗೆಯಲ್ಲೂ ಮೀಸಲಾತಿ ಕಡ್ಡಾಯಗೊಳಿಸಿ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.BIG NEWS: ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್ ಗಳು, ಸ್ವಚ್ಛತಾ ಸಿಬ್ಬಂದಿ ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯ ನೀತಿಯಾಗಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಲು 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯವಾಗುವುದಿಲ್ಲ.

ಪ್ರತಿ ವರ್ಷವೂ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆಟಿಪಿಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.

ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ