Breaking News

HSRṔ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಜೂನ್‌ 12 ರವರೆಗೂ ಅವಕಾಶ!

Spread the love

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್‌ 12 ರವರೆಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ.

ವಾಹನ ಸವಾರರಿಗೆ ಗುಡ್‌ ನ್ಯೂಸ್‌ : ʻHSRṔ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಜೂನ್‌ 12 ರವರೆಗೂ ಅವಕಾಶ!

ಹೌದು, ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ನಿನ್ನೆ ಹೈಕೋರ್ಟ್​ ಮುಂದೆ ಈ ರಿಟ್​ ಅರ್ಜಿ ವಿಚಾರಣೆಗೆ ಬಂದಿದೆ. ಆದ್ರೆ, ಹಲವು ರಿಟ್ ಅರ್ಜಿಗಳ ವಿಚಾರಣೆ ಜೂನ್ 11ಕ್ಕೆ ನಿಗದಿಯಾಗಿದೆ. ಹೀಗಾಗಿ ಹೀಗಾಗಿ ಜೂನ್ 12 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರದ ಪರವಾಗಿ ಎಎಜಿ ರೂಬೆನ್ ಜೇಕಬ್ ಅವರು ಹೈಕೋರ್ಟ್​​ಗೆ ಹೇಳಿದ್ದಾರೆ. ಎಎಜಿ ರೂಬೆನ್ ಜೇಕಬ್ ಅವರು ಈ ಹೇಳಿಯನ್ನು ದಾಖಲಿಸಿಕೊಂಡ ಹೈಕೋರ್ಟ್​ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.

ರಾಜ್ಯದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿರುವ ಸುಮಾರು 2 ಕೋಟಿ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನ, ಪ್ರಯಾಣಿಕ ಕಾರುಗಳು, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರೈಲರ್‌, ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ