Breaking News

ಜಲಾಶಯದ ಹಿನ್ನೀರಿನಲ್ಲಿ ದೋಣಿ ಮಗುಚಿ ಆರು ಮಂದಿ ಮೃತ್ಯು

Spread the love

ಪುಣೆ : ಜಿಲ್ಲೆಯ ಉಜನಿ ಅಣೆಕಟ್ಟಿನ ಹಿನ್ನೀರಿನಲ್ಲಿ ದೋಣಿ ಮಗುಚಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.Maharashtra: ಜಲಾಶಯದ ಹಿನ್ನೀರಿನಲ್ಲಿ ದೋಣಿ ಮಗುಚಿ ಆರು ಮಂದಿ ಮೃತ್ಯು

ಮಂಗಳವಾರ ಸಂಜೆ ಭಾರೀ ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ.

ಸಂಜೆ ನಗರದಾದ್ಯಂತ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸಿದ ನಂತರ ಈ ಘಟನೆ ಸಂಭವಿಸಿದೆ . ಇಂದಾಪುರ ತಹಶೀಲ್ದಾರ್ ಶ್ರೀಕಾಂತ್ ಪಾಟೀಲ್ ಅವರು ನೀಡಿದ ಪ್ರಕಾರ, ಮೃತರಲ್ಲಿ ಮೂವರು ಪುರುಷರು, ಒಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.

ಬೋಟ್ ಸೇವೆಯು ಕಲಾಶಿ ಮತ್ತು ಭುಗಾವ್ ಗ್ರಾಮಗಳ ನಡುವೆ ಕಾರ್ಯನಿರ್ವಹಿಸುತ್ತಿತ್ತು. .ಏಳು ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಪಲ್ಟಿಯಾಗಿದೆ. ಬೋಟ್‌ನಲ್ಲಿದ್ದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಯೊಬ್ಬರು ಈಜಿ ಸುರಕ್ಷಿತ ಸ್ಥಳಕ್ಕೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತದ ಸಹಾಯದಿಂದ ನೀರು ಪಾಲಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾತ್ತಿದೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ