Breaking News

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Spread the love

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಕಾಂಗ್ರೆಸ್‌ ಸರ್ಕಾರ ಪರ ತಾವು ಮೃದು ಧೋರಣೆ ತೋರುತ್ತಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ನಿರಂತರವಾಗಿದೆ.

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

ಯಾವ ಸರಕಾರದ ಮೇಲೂ ಮೃದು ಧೋರಣೆ ಅನುಸರಿಸಿಲ್ಲ ಎಂದರು.

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಸರ್ಕಾರ ತಮ್ಮನ್ನ ಕರೆದು ಮಾತನಾಡಿಸಿಲ್ಲ. ಮೊದಲು ಮೀಸಲಾತಿಗಾಗಿ ಮನವಿ ಮಾಡುತ್ತೇವೆ. ಅದಕ್ಕೆ ಸ್ಪಂದನೆ ಸಿಗದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದರು.

ಕಾರವಾರ ಜಿಲ್ಲೆಯಲ್ಲಿ ಪಂಚಮಸಾಲಿ ಮೀಸಲಾತಿ ಜಾಗೃತಿ ಮೂಡಿಸುವ ಅವಶ್ಯಕತೆಯಿದ್ದು, ಈ ಹಿನ್ನೆಲೆಯಲ್ಲಿ ಇದೇ 23 ರಂದು ಜೋಯಡಾ ತಾಲೂಕಿನ ಉಳವಿಯಲ್ಲಿ ಶ್ರೀ ಚನ್ನಬಸವೇಶ್ವರರಿಗೆ ಪ್ರಾರ್ಥನೆ ಸಲ್ಲಿಸಿ, ಸಂಕಲ್ಪ ಮಾಡಿ ಹೋರಾಟ ಆರಂಭವಾಗಲಿದೆ ಎಂದರು.


Spread the love

About Laxminews 24x7

Check Also

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

Spread the loveಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ