Breaking News

ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ : ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರು ಸೇರಿ 11 ಜನರು ʻNIAʼ ವಶಕ್ಕೆ

Spread the love

ಹುಬ್ಬಳ್ಳಿ : ರಾಮೇಶ್ವರಂ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರು ಸೇರಿದಂತೆ 11 ಜನರನ್ನು ವಶಕ್ಕೆ ಪಡೆದು ವಿಚಾರಣ ನಡೆಸಿದೆ.

ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಂತ ಶೋಯೇಬ್ ಅಬ್ದುಲ್ ಮಿರ್ಜಾ ಎಂಬಾತನ ನಿವಾಸದ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳಿಕ ಎನ್‌ ಐಎ ಅಧಿಕಾರಿಗಳು ಶೋಯೇಬ್‌ ಮಿರ್ಜಾ ಹಾಗೂ ಆತನ ಸಹೋದರ ಅಜೀದ್‌ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ : ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರು ಸೇರಿ 11 ಜನರು ʻNIAʼ ವಶಕ್ಕೆ

ಹುಬ್ಬಳ್ಳಿಯ ಇಂದಿರಾನಗರದ ಎನ್‌ ಐಎ ಕಚೇರಿಯಲ್ಲಿ ಇಬ್ಬರು ಸಹೋದರರನ್ನು ತೀವ್ರ ವಿಚಾರಣೆ ನಡೆಸಿರುವ ಎನ್‌ ಐಎ ಅಧಿಕಾರಿಗಳು, ವಿದೇಶಿ ಹ್ಯಾಂಡ್ಲರ್‌ ಗಳ ಜೊತೆಗೆ ಲಿಂಕ್‌ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಬ್ದುಲ್‌ ಮತೀನ್‌ ಹಾಗೂ ಮುಸಾವೀರ್‌ ಹುಸೇನ್‌ ಗೆ ಹಣ ಸಂದಾಯ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ವಿಚಾರಣೆ ನಡೆಸಲಾಗುತ್ತಿದೆ. ರಾಮೇ‍ಶ್ವರಂ ಕೆಫೆ ಬಾಂಬ್‌ ಸ್ಪೋಟದ ಬಳಿಕ ಮುಸಾವೀರ್‌ ಹುಬ್ಬಳ್ಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಹಣ ಪಡೆದು ಬಾಂಬರ್‌ ಪಶ್ಚಿಮ ಬಂಗಾಳಕ್ಕೆ ತೆರಳಿರುವ ಸಾಧ್ಯತೆ ಇದೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್-ಎ-ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ