Breaking News

ಚಾಕೊಲೇಟ್ ಗ್ಯಾಂಗ್​ ಬೆನ್ನಲ್ಲೇ ಆಯಕ್ಟೀವ್ ಆಯ್ತು ಜ್ಯೂಸ್ ಗ್ಯಾಂಗ್:

Spread the love

ಬೆಳಗಾವಿ, ಮೇ 22: ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ರೈಲಿನಲ್ಲಿ ಚಾಕೊಲೇಟ್ ಗ್ಯಾಂಗ್ ​​ಭಾರಿ ಸದ್ದು ಮಾಡಿತ್ತು. ಕಳೆದ ಕೆಲ ತಿಂಗಳ ಹಿಂದೆ ರೈಲಿನಲ್ಲಿ ಮತ್ತು ಬರುವ ಚಾಕಲೇಟ್​​ ನೀಡಿ ನಗನಾಣ್ಯವನ್ನು ಗ್ಯಾಂಗ್ ದೋಚಿತ್ತು. ಇದೀಗ ಆ ಗ್ಯಾಂಗ್ ಬಳಿಕ ಬಸ್​ನಲ್ಲಿ ಜ್ಯೂಸ್ ಗ್ಯಾಂಗ್(Juice gang)ಆಯಕ್ಟೀವ್ ಆಗಿದೆ. ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್​​ನಲ್ಲಿಯೇ ಜ್ಯೂಸ್ ಹಾಗೂ ಬಾಳೆ ಹಣ್ಣು ಕೊಟ್ಟು ನಗನಾಣ್ಯ ದೋಚಿ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ ನಡೆದಿದೆ.

ಚಾಕೊಲೇಟ್ ಗ್ಯಾಂಗ್​ ಬೆನ್ನಲ್ಲೇ ಆಯಕ್ಟೀವ್ ಆಯ್ತು ಜ್ಯೂಸ್ ಗ್ಯಾಂಗ್: ಕೆಎಸ್‌ಆರ್‌ಟಿಸಿ ಬಸ್​​ನಲ್ಲೇ ನಗನಾಣ್ಯ ದರೋಡೆ

ಸಂಜೀವ್ ಖೋತ (40) ಹಾಗೂ ಮತ್ತೋರ್ವ ಪ್ರಯಾಣಿಕರಿಂದ ಗ್ಯಾಂಗ್ ಸುಲಿಗೆ ಮಾಡಿದೆ. ಜ್ಯೂಸ್​​ನಲ್ಲಿ ಮೂರ್ಛೆ ಬರುವ ಪದಾರ್ಥ ಮಿಶ್ರಣ ಮಾಡಿ ಪ್ರಜ್ಞೆ ತಪ್ಪಿಸಿದ್ದು, ಬಂಗಾರದ ಚೈನ್, ಬ್ಯಾಗ್, ಪರ್ಸ್ ಕದ್ದು ಪರಾರಿ ಆಗಿದ್ದಾರೆ. ಸದ್ಯ ಹದಿನಾಲ್ಕು ಗಂಟೆಯಿಂದ ಸಂಪೂರ್ಣ ಪ್ರಜ್ಞಾಹೀನ‌ ಸ್ಥಿತಿಯಲ್ಲಿರುವ ಸಂಜೀವ್ ಖೋತಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮತ್ತೋರ್ವನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಯಾಣಿಕರ ಸೊಗಿನಲ್ಲಿ ದರೋಡೆ: ಚಾಕೊಲೇಟ್ ಗ್ಯಾಂಗ್ ಬಂಧನ

ಇತ್ತೀಚೆಗೆ ಕರ್ನಾಟಕ ಗೋವಾ ಗಡಿಯಲ್ಲಿ ಓಡಾಡುವ ರೈಲಿನಲ್ಲಿ ಚಾಕೊಲೇಟ್ ಗ್ಯಾಂಗ್ ಆಯಕ್ಟೀವ್ ಆಗಿತ್ತು. ರೈಲಿನಲ್ಲಿ ಪ್ರಯಾಣಿಕರ ಸೊಗಿನಲ್ಲಿ ಬಂದು ದರೋಡೆ ಮಾಡ್ತಿದ್ದ ಗ್ಯಾಂಗ್​​ನ ಮಸಲತ್ತಿಗೆ ಸಿಕ್ಕು ಎಂಟು ಜನ ನರಳಾಡಿ ಹೋಗಿದ್ದರು. ಬಳಿಕ ಆ ಖತರ್ನಾಕ್ ಚಾಕೊಲೇಟ್ ಗ್ಯಾಂಗ್ ಪೊಲೀಸರ ಖೆಡ್ಡಾಗೆ ಬಿದ್ದಿತ್ತು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ