Breaking News

ನಾವು ಆತ್ಮೀಯ ಸ್ನೇಹಿತನನ್ನ ಕಳ್ಕೊಂಡಿದ್ದೇವೆ: ರಾಧಿಕಾ ಸಂತಾಪ………….

Spread the love

ಬೆಂಗಳೂರು: ನಾವು ಇಂದು ಆತ್ಮೀಯ ಸ್ನೇಹಿತ ಚಿರುವನ್ನು ಕಳೆದುಕೊಂಡಿದ್ದೇವೆ ಎಂದು ನಟಿ ರಾಧಿಕಾ ಪಂಡಿತ್ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿದ್ದಾರೆ.

ನಟಿ ರಾಧಿಕಾ ಪಂಡಿತ್ ಚಿರಂಜೀವಿನ ಸಾವಿನ ಸುದ್ದಿ ತಿಳಿದ ತಕ್ಷಣ ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. “ನನಗೆ ಚಿರಂಜೀವಿ ಸಾವಿನ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ. ಒಳ್ಳೆಯ, ಸುಂದರ ಆತ್ಮ ನಮ್ಮನ್ನು ಬಿಟ್ಟು ಬೇಗನೇ ಹೋಗಿದೆ. ಹೀಗಾಗಿ ಪತ್ನಿ ಮೇಘನಾ, ಧ್ರುವ, ಅವರ ಅಮ್ಮ ಸೇರಿದಂತೆ ಇಡೀ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ. ನಾವು ಇಂದು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇವೆ” ಎಂದು ನೋವಿನಿಂದ ಬರೆದುಕೊಂಡಿದ್ದಾರೆ.

ನಟ ಯಶ್ ಕೂಡ ಚಿರು ಅಂತಿಮ ದರ್ಶನ ಪಡೆದಿದ್ದಾರೆ. ನಂತರ ಅರ್ಜುನ್ ಸರ್ಜಾ ಹಾಗೂ ಕುಟುಂಬದವರಿಗೆ ಯಶ್ ಸಾಂತ್ವನ ಹೇಳಿದ್ದಾರೆ. ಇಂದು ಬೆಳಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದು, ಚಿರಂಜೀವಿ ಸರ್ಜಾ ಅವರ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ಭಾನುವಾರ ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿತ್ತು. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದಾರೆ.

 


Spread the love

About Laxminews 24x7

Check Also

ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Spread the loveಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ