ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತು.
ದಿನಾಂಕ 22.05.2024 ಮತ್ತು 23.05.2024 ರಂದು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕೆ.ಎಸ್.ಆರ್.ಟಿ.ಸಿ ಯಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್‌ನಿಲ್ದಾಣ ಹಾಗೂ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ನಿಯಂತ್ರಣ ಕೊಠಡಿಯ ಕಾರ್ಯ ನಿರ್ವಹಣೆ ಹಾಗೂ ಬಸ್ಸುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದರು.
Laxmi News 24×7