Breaking News

SRH ಗೆಲ್ಲುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಕಾವ್ಯ ಮಾರನ್

Spread the love

IPL 2024: ಸನ್​ರೈಸರ್ಸ್ ಹೈದರಾಬಾದ್ ತಂಡವು (SRH) ಐಪಿಎಲ್ ಸೀಸನ್ 17ರ ಫೈನಲ್​ಗೆ ಪ್ರವೇಶಿಸಿದೆ. ಚೆನ್ನೈ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್​ಗಳ ಜಯ ಸಾಧಿಸಿ ಎಸ್​ಆರ್​ಹೆಚ್ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಅತ್ತ ಎಸ್​ಆರ್​ಹೆಚ್ ಗೆಲ್ಲುತ್ತಿದ್ದಂತೆ ತಂಡದ ಮಾಲಕಿ ಕಾವ್ಯ ಮಾರನ್ ಕುಣಿದು ಕುಪ್ಪಳಿಸಿದರು.

VIDEO: SRH ಗೆಲ್ಲುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಕಾವ್ಯ ಮಾರನ್

ಇದಕ್ಕೂ ಮುನ್ನ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬೌಲಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಎಸ್​ಆರ್​ಹೆಚ್ ಉತ್ತಮ ಆರಂಭ ಪಡೆದಿರಲಿಲ್ಲ. ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ಒಂದು ಹಂತದಲ್ಲಿ 160 ರನ್​​ಗಳ ಗಡಿ ದಾಟುವುದು ಕಷ್ಟಕರವಾಗಿತ್ತು.ಈ ವೇಳೆ ಸ್ಟೇಡಿಯಂ ಗ್ಯಾಲರಿಯಲ್ಲಿ ಕಾವ್ಯ ಮಾರನ್ ಹತಾಶಭಾವದೊಂದಿಗೆ ಕಾಣಿಸಿಕೊಂಡಿದ್ದರು. ಇದಾಗ್ಯೂ ಹೆನ್ರಿಕ್ ಕ್ಲಾಸೆನ್ (50) ಬಾರಿಸಿದ ಅರ್ಧಶತಕದ ನೆರವಿನಿಂದ ಎಸ್​ಆರ್​ಹೆಚ್ ತಂಡವು ನಿಗದಿತ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ