Breaking News

ಐಪಿಎಲ್​ ಫೈನಲ್ ಪಂದ್ಯ

Spread the love

IPL 2024: ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ರನ್ ಸುರಿಮಳೆಯಾಗುವ ಸಾಧ್ಯತೆಯಿದೆ.IPL 2024: ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ರನ್ ಸುರಿಮಳೆಯಾಗುವ ಸಾಧ್ಯತೆಯಿದೆ.

ಏಕೆಂದರೆ ಫೈನಲ್​ ಪಂದ್ಯಕ್ಕಾಗಿ ಬ್ಯಾಟಿಂಗ್​ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್​ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಬೃಹತ್ ಮೊತ್ತವನ್ನು ನಿರೀಕ್ಷಿಸಬಹುದು.ಫೈನಲ್ ಪಂದ್ಯಕ್ಕಾಗಿ ನಾವು ಮುಂಬೈನ ವಾಂಖೆಡೆ ಸ್ಟೇಡಿಯಂ ಮಾದರಿಯಲ್ಲಿ ಕೆಂಪು ಮಣ್ಣಿನ ಪಿಚ್ ಅನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಕ್ಯುರೇಟರ್ ಹೇಳಿದ್ದಾರೆ.

ಎಲ್ಲರಿಗೂ ಗೊತ್ತಿರುವಂತೆ ಮುಂಬೈ ಪಿಚ್ ಬ್ಯಾಟಿಂಗ್​ಗೆ ಸಹಕಾರಿ. ಹೀಗಾಗಿ ಐಪಿಎಲ್​ನ ಫೈನಲ್ ಪಂದ್ಯದಲ್ಲೂ ಬ್ಯಾಟ್ಸ್​ಮನ್​ಗಳ ಅಬ್ಬರನ್ನು ನಿರೀಕ್ಷಿಸಬಹುದು ಎಂದು ಪೀಟರ್ಸನ್ ಹೇಳಿದ್ದಾರೆ.ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬೌಲರ್​ಗಳು ಮೇಲುಗೈ ಸಾಧಿಸಿದ್ದರು.

ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ಬೌಲರ್​ಗಳು ಕೇವಲ 175 ರನ್​ಗಳಿಗೆ ಕಟ್ಟಿ ಹಾಕಿದ್ದರು. ಇದಾದ ಬಳಿಕ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಎಸ್​ಆರ್​ಹೆಚ್ ಬೌಲರ್​ಗಳು ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 139 ರನ್​ಗಳಿಗೆ ನಿಯಂತ್ರಿಸಿ 36 ರನ್​ಗಳ ಜಯ ಸಾಧಿಸಿದ್ದರು.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ