Breaking News

ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ನವಜಾತ ಶಿಶುಗಳು ಸಾವು

Spread the love

ನವದೆಹಲಿ: ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡು ಹತ್ತಿ ಉರಿದು ಕನಿಷ್ಠ 7 ನವಜಾತ ಶಿಶುಗಳು ಮೃತಪಟ್ಟಿವೆ. ನಿನ್ನೆ ರಾತ್ರಿ 11:30 ರ ಸುಮಾರಿಗೆ ‘ಬೇಬಿ ಕೇರ್ ನ್ಯೂ ಬಾರ್ನ್ ಆಸ್ಪತ್ರೆ’ ಮತ್ತು ಅದರ ಪಕ್ಕದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಶನಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ಮಕ್ಕಳ ಆಸ್ಪತ್ರೆಯ ಹೊರಭಾಗ.

ಶಹದಾರದ ಕೃಷ್ಣ ನಗರದಲ್ಲಿನ ಬಹುಮಹಡಿ ವಸತಿ ಕಟ್ಟಡದಲ್ಲಿ ಮತ್ತೊಂದು ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. ಅಧಿಕಾರಿಗಳ ಪ್ರಕಾರ, ಒಟ್ಟು 12 ಶಿಶುಗಳನ್ನು ರಕ್ಷಿಸಲಾಗಿದೆ, ಅವರಲ್ಲಿ 7 ಶಿಶುಗಳು ಮೃತಪಟ್ಟಿದ್ದು, ಐವರನ್ನು ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ