Breaking News

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ? ಸಿಎಂ

Spread the love

ಮಂಗಳೂರು: ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ ಎಂದರು.

ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ.

ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ? ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಹರೀಶ್ ಪೂಂಜ ಅವರ ಮೇಲೆ ದಾಖಲಾಗಿದೆ.

ಒಂದರಲ್ಲಿ ಸ್ಟೇಷನ್ ಬೇಲ್ ಸಿಕ್ಕಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ? ಕಾನೂನು ಹಾಗೆ ಹೇಳುತ್ತದೆಯಾ? ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ