ದಾವಣಗೆರೆ: ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ.
ಮಟ್ಕಾ ನಡೆಸುತ್ತಿದ್ದ ಆರೋಪದಲ್ಲಿ ಚನ್ನಗಿರಿ ಪೊಲೀಸರು ಅದಿಲ್ ಎಂಬಾತನನ್ನ ವಶಕ್ಕೆ ಪಡೆದಿದ್ದರು.
ಠಾಣೆಯಲ್ಲಿ ಅದಿಲ್ ಕುಸಿದು ಬಿದ್ದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ಉದ್ವಿಗ್ನಗೊಂಡ ಮೃತನ ಸಂಬಂಧಿಕರು ಮತ್ತು ನೂರಾರು ಜನ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದು ಅಲ್ಲೆ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.ಈ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿ ಹೆಗಲಿಗೆ ನೀಡಲಾಗಿದ್ದು ಶೀಘ್ರವೇ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿದ್ದು, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ ಎಂದರು.
Laxmi News 24×7