Breaking News
Home / Uncategorized / ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ

ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ

Spread the love

ಗದಗ, ಮೇ 26: ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಸಿಟ್ಟಿಗೆದ್ದು ಹಾಡ ಹಗಲೇ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ (knife) ಇರಿದು ಹಲ್ಲೆ (attack) ಮಾಡಿರುವಂತಹ ಘಟನೆ ಗದಗದ ಟಾಂಗಾ ಕೂಟ್ ಬಳಿ ನಡೆದಿದೆ.

ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ಆಕ್ರೋಶ: ಚಾಕುವಿನಿಂದ ಇರಿದು ಹಲ್ಲೆ, ಆರೋಪಿ ವಶಕ್ಕೆ

ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ವಿನಾಯಕ ಕಬಾಡಿಯಿಂದ ಗೋವಿಂದರಾಜ ಶಿರಹಟ್ಟಿ ಮೇಲೆ ಹಲ್ಲೆ ಮಾಡಲಾಗಿದೆ.

ಆರೋಪಿ ವಿನಾಯಕನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ. ಗದಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಹಲ್ಲೆಗೊಳಗಾದ ಗೋವಿಂದರಾಜ ಶಿರಹಟ್ಟಿ ಇಸ್ಕಾನ್ ಕೀರ್ತನೆ ಸಂಘ ನಡೆಸುತ್ತಿದ್ದರು. ಇದೇ ಸಂಘದಿಂದ ವಿನಾಯಕ​ನನ್ನ ತೆಗೆದು ಹಾಕಲಾಗಿತ್ತು. 2018ರಿಂದ 2023ರವರೆಗೆ ಕೀರ್ತನಾ ಸಂಘದಲ್ಲಿದ್ದ ವಿನಾಯಕ ಕಬಾಡಿ, ಕಳೆದ 1 ವರ್ಷದಿಂದ ದೂರ ಇಡಲಾಗಿತ್ತು. ಇದಕ್ಕೆ ಆಕ್ರೋಶ ಕೂಡ ವ್ಯಕ್ತಪಡಿಸಲಾಗಿತ್ತು.


Spread the love

About Laxminews 24x7

Check Also

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

Spread the love ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ