Breaking News

“ದೇವರಾಣೆಗೂ ಜಿಲ್ಲೆಯ ಅಭಿವೃದ್ಧಿಯೇ ನನ್ನ ಮೂಲಮಂತ್ರ”

Spread the love

ಹಾಸನ, ಜೂ.8- ದೇವರಾಣೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹಾಗೂ ಯಾವುದೇ ರಾಜಕೀಯ ಮಾಡುವ ಉದ್ದೇಶವಿಲ್ಲ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರಿಕ ಮತ್ತು ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲೆಯ ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪ್ರಾಭಲ್ಯವಿರುವ ಜಿಲ್ಲಾಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಜಿಲ್ಲಾಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಲ್ಲಿನ ಜೆಡಿಎಸ್ ಶಾಸಕರನ್ನು ಜನಪ್ರತಿನಿಧಿಗಳನ್ನು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಜಿಲ್ಲಾಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ನಾನು ಯಾವುದೇ ಖಾತೆಯನ್ನು ಹಾಗೂ ಜಿಲ್ಲಾ ಉಸ್ತುವಾರಿಯನ್ನು ವಹಿಸಿಕೊಳ್ಳುವುದಾಗಿ ಕೇಳಿಕೊಂಡಿಲ್ಲ. ಮುಖ್ಯಮಂತ್ರಿಗಳೇ ನನಗೆ ಜವಾಬ್ದಾರಿ ನೀಡಿದ್ದು, ಅವರ ಆಶಯದಂತೆ ಕೆಲಸ ಮಾಡುವುದಾಗಿ ತಿಳಿಸಿದರು. ಸ್ವ ಕ್ಷೇತ್ರವಾದ ಮಹಾಲಕ್ಷ್ಮಿ ಲೇಔಟ್ ಅಭಿವೃದ್ಧಿ ಮಾಡಿದ ರೀತಿಯಲ್ಲಿಯೇ ಹಾಸನ ಜಿಲ್ಲಾಯ ಅಭಿವೃದ್ಧಿಯನ್ನು ಮಾಡುವ ಇಚ್ಚೆ ಹೊಂದಿದ್ದೇನೆ ಹೊರತು ಯಾವುದೇ ರಾಜಕೀಯ ಮಾಡುವ ಉದ್ದೇಶ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾಗೆ ವಾರದಲ್ಲಿ ಎರಡು ಬಾರಿ ಭೇಟಿ ನೀಡಲಿದ್ದು, ಜನರ ಸಮಸ್ಯೆಯನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ ಅವರು ಕೊರೋನಾ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಲಾಗಿದ್ದು, ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಸ್ಥಳೀಯ ಬಿಜೆಪಿ ನಾಯಕರ ವಿಸ್ವಾಸಕ್ಕೆ ಪಡೆದು ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ತಿಳಿಸಿದರು.

# ಸಚಿವರಿಗೆ ಅದ್ಧೂರಿ ಸ್ವಾಗತ:
ಜಿಲ್ಲಾ ಉಸ್ತುವಾರಿವಹಿಸಿಕೊಂಡ ಬಳಿಕ ಹಾಸನಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಸಾಯಿಮಂದಿರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿ ವಿಶೇಷ ಪೆÇಜೆ ಸಲ್ಲಿಸಿದರು. ಹಿರೀಸಾವೆಯಲ್ಲಿ ಜನರು ಸೇಬಿನ ಬೃಹತ್ ಹಾರದ ಮೂಲಕ ಸ್ವಾಗತ ಕೋರಿದರು. ಮಾಜಿ ಸಚಿವ ಎ.ಮಂಜು, ಶಾಸಕ ಸಿ.ಎನ್.ಬಾಲಕೃಷ್ಣ, ಪ್ರೀತಂ ಗೌಡ, ಎಂ.ಎ.ಗೋಪಾಲಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ , ಮುಖಂಡರಾದ ಪಟೇಲ್ ಮಂಜುನಾಥ್ ಮತ್ತಿತರರಿದ್ದರು


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ