Breaking News

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ

Spread the love

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ.. ಹವಮಾನ ಇಲಾಖೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರ ಮತ್ತು ತುಮಕೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇನ್ನೂ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ