ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮೊದಲೇ ಜೂನ್ 1 ರಂದು ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಾಧನೆ ಮುಂದಿನ ರಣತಂತ್ರದ ಬಗ್ಗೆ ಜೂನ್ ಸಭೆಯಲ್ಲಿ ಚರ್ಚಿಸಲಾಗುವುದು.
ಜೂನ್ 1ರಂದು 7ನೇ ಹಾಗೂ ಕೊನೆ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ.
ಈ ಹಿನ್ನಲೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ಮಹತ್ವ ಪಡೆದುಕೊಂಡಿದೆ.
ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ನಡೆಯುವ ದಿನವಾದ ಜೂನ್ 1(ಶನಿವಾರ) ರಂದು ಸಭೆ ನಡೆಸಲಾಗುವುದು. ಚುನಾವಣಾ ಫಲಿತಾಂಶಗಳು ಪ್ರಕಟವಾಗುವ 4 ದಿನಗಳ ಮೊದಲು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಇಂಡಿಯಾ ಬ್ಲಾಕ್‌ನ ಎಲ್ಲಾ ಮೈತ್ರಿ ಪಾಲುದಾರರನ್ನು ಆಹ್ವಾನಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿನ ಸಾಧನೆಯನ್ನು ಗಮನದಲ್ಲಿಟ್ಟುಕೊಂಡು ಮೈತ್ರಿಕೂಟದ ಮುಂದಿನ ಕ್ರಮಗಳನ್ನು ಪರಿಶೀಲಿಸಲು ಮತ್ತು ಚರ್ಚಿಸಲು ಸಭೆಯನ್ನು ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
Laxmi News 24×7