Breaking News

ಉಪರಾಷ್ಟ್ರಪತಿ, ರಾಜ್ಯಪಾಲ ಬೆಳಗಾವಿಗೆ

Spread the love

ಬೆಳಗಾವಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಮೇ 27ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.

ಅಂದು ಬೆಳಿಗ್ಗೆ 10ಕ್ಕೆ ಇಂಡಿಯನ್‌ ಕೌನ್ಸಿಲ್‌ ಆಫ್‌ ಮೆಡಿಕಲ್‌ ರಿಸರ್ಚ್‌-ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟ್ರೇಡಿಷನಲ್‌ ಮೆಡಿಸಿನ್‌(ಐಸಿಎಂಆರ್‌-ಎನ್‌ಐಟಿಎಂ)ನಲ್ಲಿ ನಡೆಯಲಿರುವ 18ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಉಪರಾಷ್ಟ್ರಪತಿ, ರಾಜ್ಯಪಾಲ ಬೆಳಗಾವಿಗೆ ಇಂದು

11.30ಕ್ಕೆ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜ್ಯುಕೇಷನ್‌ ಆಯಂಡ್‌ ರಿಸರ್ಚ್‌(ಕಾಹೇರ್‌)ನಲ್ಲಿ ನಡೆಯಲಿರುವ 14ನೇ ಘಟಿಕೋತ್ಸವದಲ್ಲಿ ಜಯದೀಪ್‌ ಧನಕರ್‌ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಥಾವರಚಂದ್‌ ಗೆಹಲೋತ್‌ ಘಟಿಕೋತ್ಸವ ಭಾಷಣ ಮಾಡುವರು. ಇಲ್ಲಿಂದ ಬೆಂಗಳೂರಿಗೆ ತೆರಳುವರು.

‘ಉಪರಾಷ್ಟ್ರಪತಿ, ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದೇವೆ. ಸಾಂಬ್ರಾ ವಿಮಾನ ನಿಲ್ದಾಣ, ಅವರು ಸಂಚರಿಸುವ ಮಾರ್ಗ ಹಾಗೂ ಪಾಲ್ಗೊಳ್ಳಲಿರುವ ಕಾರ್ಯಕ್ರಮದ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದೇವೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ತಿಳಿಸಿದ್ದಾರೆ.

 ಉಪರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಬೆಳಗಾವಿಯ ಇಂಡಿಯನ್‌ ಕೌನ್ಸಿಲ್‌ ಆಫ್‌ ಮೆಡಿಕಲ್‌ ರಿಸರ್ಚ್‌-ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟ್ರೇಡಿಷನಲ್‌ ಮೆಡಿಸಿನ್‌ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಯಿತು


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ