ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ.

ಈ ಸಿನಿಮಾದ ಚಿತ್ರೀಕರಣ ಬೆಳಗಾವಿಯಲ್ಲಿ ನಡೆಯುತ್ತಿದೆ. ಶಿವರಾಜ್ಕುಮಾರ್ ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್ ಮುಗಿಸಿದ ನಂತರ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಅವರು ತೆರಳಿದ್ದಾರೆ.ದೇವರ ದರ್ಶನ ಪಡೆದು ಬಂದಿದ್ದಾರೆ.
ನಟ ಶಿವರಾಜ್ಕುಮಾರ್ (Shivarajkumar) ಅವರು ಒಂದಷ್ಟು ದಿನಗಳ ಕಾಲ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದರು. ಪತ್ನಿ ಗೀತಾ ಶಿವರಾಜ್ಕುಮಾರ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದರು.
ಶಿವಮೊಗ್ಗದಲ್ಲಿ ಎಲೆಕ್ಷನ್ ಮುಗಿದ ನಂತರ ಶಿವಣ್ಣ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದರು.