Breaking News

ಇಷ್ಟೊಂದು ಕ್ರೂರ, ಭೀಕರ ಹತ್ಯೆಯನ್ನು ನೋಡಿರಲಿಲ್ಲ- ಇನ್‌ಸ್ಪೆಕ್ಟರ್‌

Spread the love

ಕುಣಿಗಲ್: ಹುಲಿಯೂರುದುರ್ಗದಲ್ಲಿ ಮಂಗಳವಾರ ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕತ್ತು ಕತ್ತರಿಸಿ ಕೊಂದ ನಂತರ ಇಡೀ ರಾತ್ರಿ ದೇಹದ ಚರ್ಮ ಸುಲಿದು, ಅಂಗಾಂಗಗಳನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ.

ಪುಷ್ಪಾ (35) ಬರ್ಬರವಾಗಿ ಹತ್ಯೆಯಾದ ಮಹಿಳೆ.

ಕೊಲೆ ಆರೋಪದ ಮೇಲೆ ಪತಿ ಶಿವರಾಮನನ್ನು ಪೊಲೀಸರು ಬಂಧಿಸಿದ್ದಾರೆ

ಶಿವಮೊಗ್ಗ ಜಿಲ್ಲೆ ಸಾಗರದ ಪುಷ್ಪ ತಾಲ್ಲೂಕಿನ ಸುಗ್ಗನಹಳ್ಳಿಯ ಶಿವರಾಮನನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದೂ ಅಂತರ್ಜಾತಿ ವಿವಾಹ. ದಂಪತಿಗೆ ಎಂಟು ವರ್ಷದ ಗಂಡು ಮಗುವಿದೆ.

ಸಾಮಿಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿವರಾಮ ಹುಲಿಯೂರುದುರ್ಗದ ಹೊಸಪೇಟೆ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.ಕುಣಿಗಲ್: ಇಷ್ಟೊಂದು ಕ್ರೂರ, ಭೀಕರ ಹತ್ಯೆಯನ್ನು ನೋಡಿರಲಿಲ್ಲ- ಇನ್‌ಸ್ಪೆಕ್ಟರ್‌

‘ದಂಪತಿ ನಡುವೆ ಸೋಮವಾರ ರಾತ್ರಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಿಟ್ಟಿಗೆದ್ದ ಶಿವರಾಮ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿದ್ದಾನೆ. ರುಂಡವನ್ನು ಪಕ್ಕದಲ್ಲಿ ಇಟ್ಟುಕೊಂಡು ಚಾಕುವಿನಿಂದ ಇಡೀ ದೇಹದ ಚರ್ಮ ಸುಲಿದಿದ್ದಾನೆ. ಚಾಕುವಿನಿಂದ ಎದೆ, ಗುಪ್ತಾಂಗಗಳನ್ನು ಬಗೆದು ಹಾಕಿದ್ದಾನೆ. ಅಷ್ಟಕ್ಕೇ ಸುಮ್ಮನಾಗದೆ ಅಂಗಾಂಗಗಳನ್ನು ತುಂಡು, ತುಂಡಾಗಿ ಕತ್ತರಿಸಿ ಹಾಕಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪುಟ್ಟ ಕೋಣೆ ತುಂಬಾ ರಕ್ತ ಹರಡಿತ್ತು. ಒಂದು ಕಡೆ ರುಂಡ ಮತ್ತು ಮತ್ತೊಂದು ಕಡೆ ವಿಕಾರವಾಗಿ ತುಂಡು, ತುಂಡಾಗಿ ಕತ್ತರಿಸಿ ಹಾಕಿದ್ದ ದೇಹ ಇತ್ತು. ಕರಳು ಹಾಗೂ ಇತರ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪಕ್ಕದಲ್ಲಿಯೇ ಎಂಟು ವರ್ಷದ ಮಗು ಮಲಗಿತ್ತು. ಆರೋಪಿ ಇಡೀ ರಾತ್ರಿ ಶವದ ಜೊತೆಯಲ್ಲಿಯೇ ಕಳೆದಿದ್ದಾನೆ.

ಮಂಗಳವಾರ ಬೆಳಗಿನ ಜಾವ ಶಿವರಾಮ ತಾನು ಕೆಲಸ ಮಾಡುತ್ತಿದ್ದ ಸಾಮಿಲ್ ಮಾಲೀಕರ ಮಗ ಪ್ರದೀಪ್‌ ಎಂಬುವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪ್ರದೀಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಬೆಳಗಿನ ಜಾವ ಮನೆಗೆ ಹೋದ ಪೊಲೀಸರು ಸ್ಥಳದಲ್ಲಿ ವಿಕಾರವಾಗಿ ಬಿದ್ದಿದ್ದ ಶವವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಏನೂ ನಡೆದಿಲ್ಲ ಎಂಬಂತೆ ಮನೆಯಲ್ಲಿಯೇ ಸಹಜವಾಗಿ ಕುಳಿತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದಲ್ಲಿಯೇ ಇರುವ ಪುಷ್ಪಾ ಸಂಬಂಧಿ ಶಿವಶಂಕರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ