Breaking News

ತಳಿರು ತೋರಣಗಳಿಂದ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ

Spread the love

ರಿಹರ: ಮೇ 31ರಿಂದ 1ರಿಂದ 10ನೇ ತರಗತಿಯ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಎಲ್ಲಾ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸೂಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ ತಿಳಿಸಿದರು.

ಹರಿಹರ: ತಳಿರು ತೋರಣಗಳಿಂದ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 53 ಸರ್ಕಾರಿ ಕಿರಿಯ, 81 ಸರ್ಕಾರಿ ಹಿರಿಯ ಪ್ರಾಥಮಿಕ, 19 ಸರ್ಕಾರಿ ಪ್ರೌಢಶಾಲೆಗಳು, ತಲಾ 25 ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, 20 ಅನುದಾನ ರಹಿತ ಕಿರಿಯ ಪ್ರಾಥಮಿಕ, 42 ಅನುದಾನ ರಹಿತ ಹಿರಿಯ ಪ್ರಾಥಮಿಕ ಹಾಗೂ 20 ಅನುದಾನ ರಹಿತ ಪ್ರೌಢಶಾಲೆಗಳು ಸೇರಿ ಒಟ್ಟು 285 ಶಾಲೆಗಳಿವೆ ಎಂದರು.ಶಾಲಾ ಆವರಣ, ಕೊಠಡಿಗಳು, ಅಕ್ಷರ ದಾಸೋಹದ ಕೊಠಡಿಗಳ ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ, ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚುವ ಮೂಲಕ ಸ್ವಾಗತಿಸುವಂತೆ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಸಭೆಯಲ್ಲಿ ಸೂಚಿಸಲಾಗಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ